Breaking News

ಹಿಜಾಬ್ ಸಮವಸ್ತ್ರ ತೆಗೆಯಲು ನಿರಾಕರಿಸಿದ ಶಿಕಾರಿಪುರ ವಿದ್ಯಾರ್ಥಿನಿಯರು

ಶಿಕಾರಿಪುರ: ಹಿಜಾಬ್ ತೆಗೆದು ತರಗತಿ ಒಳಗೆ ಪ್ರವೇಶ ಮಾಡುವುದಿಲ್ಲ ಎಂದು ಪಟ್ಟಣದ ಮೌಲಾನಾ ಆಜಾದ್ ಮಾದರಿ ಶಾಲೆ ವಿದ್ಯಾರ್ಥಿನಿಯರು ಪಟ್ಟು ಹಿಡಿದರು.

ಮೌಲಾಜಾ ಆಜಾದ್ ಮಾದರಿ ಶಾಲೆಯಲ್ಲಿ ಬೆಳಿಗ್ಗೆ ಪ್ರಾರ್ಥನೆ ಮುಗಿದ ನಂತರ ಮುಖ್ಯೋಪಾಧ್ಯಾಯರಾದ ಮಮತಾಸಾಲಿ ಮಾತನಾಡಿ, ‘ಹೈಕೋರ್ಟ್ ಮಧ್ಯಂತರ ಆದೇಶದ ಅನುಸಾರ ಹಿಜಾಬ್ ತೆಗೆದು ಸಮವಸ್ತ್ರದಲ್ಲಿ ತರಗತಿ ಒಳಗೆ ಪ್ರವೇಶ ಮಾಡಬೇಕು’ ಎಂದು ಸೂಚಿಸಿದರು.

ಆಗ ವಿದ್ಯಾರ್ಥಿನಿಯರು, ‘ಹಿಜಾಬ್ ತೆಗೆಯುವುದಿಲ್ಲ’ ಎಂದು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ಹಿಜಾಬ್ ತೆಗೆಯದ ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿತ್ತು. ತಹಶೀಲ್ದಾರ್ ಎಂ.ಪಿ. ಕವಿರಾಜ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್ ಭೇಟಿ ನೀಡಿದ್ದರು.

ತಹಶೀಲ್ದಾರ್ ಎಂ.ಪಿ. ಕವಿರಾಜ್ ಮಾತನಾಡಿ, ‘ಹಿಜಾಬ್ ಹಾಗೂ ಕೇಸರಿ ಶಾಲು ಹಾಕದೆ ಸಮವಸ್ತ್ರದಲ್ಲಿ ಶಾಲಾ, ಕಾಲೇಜಿಗೆ ಬರಬೇಕು ಎಂದು ಹೈಕೋರ್ಟ್‌ ಮಧ್ಯಂತರ ಆದೇಶ ನೀಡಿದೆ. ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಈ ತೀರ್ಪು ನೀಡಿದೆ. ಹಿಜಾಬ್ ತೆಗೆದು ತರಗತಿ ಪ್ರವೇಶಿಸುವ ಮೂಲಕ ನ್ಯಾಯಾಲಯದ ತೀರ್ಪನ್ನು ಪಾಲಿಸಬೇಕು. ಶಿಕ್ಷಣಕ್ಕೆ ಆದ್ಯತೆ ನೀಡಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿಯರು, ‘ಹಿಜಾಬ್ ತೆಗೆದು ನಾವು ತರಗತಿ ಪ್ರವೇಶಿಸುವುದಿಲ್ಲ. ನಮ್ಮ ಧರ್ಮದ ಪ್ರಕಾರ ಹಿಜಾಬ್ ಧರಿಸಿದ್ದೇವೆ. ಹಿಜಾಬ್ ಧರಿಸಿ ಶಾಲೆಗೆ ಬರುವುದು ನಮಗೆ ರೂಢಿಯಾಗಿದೆ. ಹಿಜಾಬ್ ತೆಗೆದರೆ ನಮ್ಮ ಪೋಷಕರು ನಮ್ಮನ್ನು ಶಾಲೆಗೆ ಕಳುಹಿಸುವುದಿಲ್ಲ. ಹಿಜಾಬ್ ತೆಗೆಯಬೇಕಾದರೆ ಪೋಷಕರನ್ನು ಕರೆಯಿಸಿ ಮಾತನಾಡಬೇಕು’ ಎಂದರು.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *