Breaking News

ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಅನುದಾನ ಬಿಡುಗಡೆ : ಥಾವರ್‌ಚಂದ್‌ ಗೆಹಲೋತ್‌


ವಿಧಾನಸಭೆ : ಬೆಂಗಳೂರು ನಗರದ ಅಭಿವೃದ್ಧಿ ಕಾರ್ಯ ಮತ್ತು ಮೂಲಸೌಕರ್ಯ ಕಲ್ಪಿಸಲು ರಾಜ್ಯ ಸರ್ಕಾರ 8,015 ಕೋಟಿ ರು.

ಅನುಮೋದನೆ ನೀಡಿದ್ದು, 2022-23ರಲ್ಲಿ ಬೆಂಗಳೂರು ಮೆಟ್ರೋ ರೈಲು ಯೋಜನೆ ಎರಡನೇ ಹಂತವನ್ನು ಪೂರ್ಣಗೊಳಿಸಲಾಗುವುದು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌  ಹೇಳಿದ್ದಾರೆ.

ಸೋಮವಾರ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ಅವರು, ಬೆಂಗಳೂರು ನಗರದ ವ್ಯವಸ್ಥಿತ ಅಭಿವೃದ್ಧಿಗೆ ಸರ್ಕಾರ ಕ್ರಮ ಕೈಗೊಂಡಿದೆ. 8,015 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಮೂಲಸೌಕರ್ಯ ಕಲ್ಪಿಸುವ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ. ಮೆಟ್ರೋ ರೈಲು ಸೇವೆಯನ್ನು ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗಿದೆ. ಎರಡನೇ ಹಂತದಲ್ಲಿ 32.54 ಕಿ.ಮೀ.ಗಳ ಉದ್ದದ ಮಾರ್ಗವನ್ನು 2022-23ರಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಭರವಸೆ ನೀಡಿದರು.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *