Breaking News

ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ ನಿಧನ


ಮಂಡ್ಯ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​ ನಾಯಕ ಹಾಗೂ ಮಾಜಿ ಶಾಸಕ ಡಾ.ಹೆಚ್.ಡಿ.ಚೌಡಯ್ಯ (94) ಅವರು ತಡರಾತ್ರಿ 2.15ರ ವೇಳೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ತಾಲೂಕಿನ ಹೊಳಲು ಗ್ರಾಮದ ತಮ್ಮ ನಿವಾಸದಲ್ಲಿ ಚೌಡಯ್ಯ ಅವರು ನಿಧನರಾಗಿದ್ದಾರೆ.1928ರಲ್ಲಿ ಜನಿಸಿದ ಚೌಡಯ್ಯ ಅವರು ಕೃಷಿ ವಿಭಾಗದಲ್ಲಿ ಬಿಎಸ್​ಸಿ ಪದವಿ ಶಿಕ್ಷಣ ಪಡೆದಿದ್ದರು. ಇವರು 4 ಬಾರಿ ಕೆರಗೋಡು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಕಾವೇರಿ ಹೋರಾಟದಲ್ಲಿ ಮಾದೇಗೌಡರೊಂದಿಗೆ ಪಾಲ್ಗೊಂಡಿದ್ದ ಚೌಡಯ್ಯ ಅವರು ಪಿಇಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *