ನವದೆಹಲಿ : ದೇಶದಲ್ಲಿ ನಿನ್ನೆಗಿಂತ ಶೇ.11 ರಷ್ಟು ಕೊರೋನಾ ಹೊಸ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ನಿನ್ನೆ 27,409 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಇಂದು 30,615 ಜನರಿಗೆ ಸೋಂಕು ತಗುಲಿದೆ.
ಸೋಂಕಿತರ ಸಾವಿನ ಸಂಖ್ಯೆ ಕೂಡ ಏರಿಕೆಯಾಗಿದ್ದು, 514 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.ನಿನ್ನೆ 347 ಜನ ಮಹಾಮಾರಿಗೆ ಬಲಿಯಾಗಿದ್ದರು.
ಇನ್ನು ದೇಶದಲ್ಲಿ 3,70,240 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 82,988 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,18,43,446 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

