ಗುರುಗ್ರಾಮ ( ನವದೆಹಲಿ) : ರೈಲು ಹಳಿಗಳ ಮೇಲೆ ಸೆಲ್ಫಿ ತೆಗೆದು ದುಸ್ಸಾಹಸ ಮಾಡುತ್ತಿದ್ದ ದೂರದಿಂದ ರೈಲು ಬರುತ್ತಿರುವಾಗ ರೈಲು ಬರುವುದು ಕಾಣಿಸುವ ಜತೆಗೆ ಸೆಲ್ಫಿ ತೆಗೆದರೆ ಚೆನ್ನಾಗಿ ಬರುತ್ತದೆ ಎಂದು ಹಳಿಯ ಮೇಲೆ ನಿಂತಿದ್ದ ನಾಲ್ವರು ಯುವಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ದೆಹಲಿಯ ಸರಾಯ್ ರೋಹಿಲ್ಲಾದಿಂದ ರಾಜಸ್ಥಾನದ ಅಜ್ಮೀರ್‌ಗೆ ಹೋಗುವ ಜನ ಶತಾಬ್ದಿ ಎಕ್ಸ್‌ಪ್ರೆಸ್ ಗುರುಗ್ರಾಮ ರೈಲು ನಿಲ್ದಾಣದಿಂದ ಬಸಾಯಿ ರೈಲು ನಿಲ್ದಾಣದ ಕಡೆಗೆ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿರುವುದಾಗಿ ಮೂಲಗಳು ಹೇಳಿವೆ.
ಮೃತರನ್ನು ದೇವಿಲಾಲ್ ಕಾಲೋನಿಯ ಸಮೀರ್ (19), ಮೊಹಮ್ಮದ್ ಅನಸ್ (20), ಯೂಸುಫ್ ಅಲಿಯಾಸ್ ಭೋಲಾ (21) ಮತ್ತು ಯುವರಾಜ್ ಗೋಗಿಯಾ (18) ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

