Breaking News

ಸಾಹಿತ್ಯ ಲೋಕದ ಕಳಿಚಿದ ಹಿರಿಯ ಕೊಂಡಿ : ನಾಡೋಜ ಚೆನ್ನವೀರ ಕಣವಿ ನಿಧನ


ಧಾರವಾಡ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ (93), ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಹಿರಿಯ ಕೊಂಡಿಯೊಂದು ಕಳಚಿದಂತೆ ಆಗಿದೆ.

ಅನಾರೋಗ್ಯದಿಂದಾಗಿ ಜನವರಿ 14ರಿಂದ ಧಾರವಾಡದ ಎಸ್ ಡಿ ಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ನಾಡೋಜ ಚೆನ್ನವೀರ ಕಣವಿ ದಾಖಲಾಗಿ, ಪಡೆಯುತ್ತಿದ್ದರು. ನಿನ್ನೆ ಅವರ ಸ್ಥಿತಿ ಗಂಭೀರಗೊಂಡಿರೋದಾಗಿ ತಿಳಿಸಲಾಗಿತ್ತು. ಈ ಬಳಿಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ಇನ್ನಿಲ್ಲವಾಗಿದ್ದಾರೆ.

ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್‌ಎಂದು ಪ್ರಸಿದ್ಧಿರಾದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *