Breaking News

ಹುಬ್ಬಳ್ಳಿಯಲ್ಲಿ ಮತ್ತೇ ಏರಿದ ಹಿಜಾಬ್ ವಿವಾದ ಕಾವು : ವುಮೇನ್ಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ


ಹುಬ್ಬಳ್ಳಿ : ಹಿಜಾಬ್ ವಿವಾದದ ನಡೆವೆಯೂ ಕಾಲೇಜುಗಳ ಪುನಾರಂಭವಾಗಿದ್ದು, ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಹೊರಗೆ ನಿಲ್ಲಿಸಿದ ಘಟನೆ ಇಲ್ಲಿನ ಜೆ.ಸಿ. ನಗರದ ವುಮೇನ್ಸ್ ಕಾಲೇಜಿನ ಆವರಣದಲ್ಲಿ ನಡೆದಿದೆ.

ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಹಿಜಾಬ್ ತೆಗೆದು ಒಳಗೆ ಬನ್ನಿ ಇಲ್ಲದಿದ್ದರೆ ಕಾಲೇಜು ಪ್ರವೇಶಕ್ಕೆ ಅನುಮತಿ ಇಲ್ಲ ಎಂದು ಹೇಳಿದ್ದನ್ನು ಖಂಡಿಸಿ ವಿದ್ಯಾರ್ಥಿನಿಯರು ಕಾಲೇಜು ಎದುರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವಿ ವಾಂಟ್ ಜಸ್ಟೀಸ್ ಎಂದು ವಿದ್ಯಾರ್ಥಿಗಳು ಘೋಷಣೆ ಕೂಗಿ, ಕಾಲೇಜು ಎದುರು ಕುಳಿತುಕೊಂಡು ಪ್ರತಿಯೊಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ನಾವು ಹಿಜಾಬ್ ತೆಗೆಯೋಲ್ಲ,, ನಾವು ಹಿಜಾಬ್ ಹಾಕಿಕೊಂಡೆ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದರು. ಪ್ರತಿಭಟನಾ ಸಂದರ್ಭದಲ್ಲಿ ಕಾಲೇಜು ಮುಂದೆ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

Share News

About admin

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *