Breaking News

ಈಶ್ವರಪ್ಪ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ : ಬೊಮ್ಮಾಯಿ



ಬೆಂಗಳೂರು: ಕೇಸರಿ ಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತಂತೆ ಈಗಾಗಲೇ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂಬುದಾಗಿ ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂಬುದನ್ನೂ ತಿಳಿಸಿದ್ದಾರೆ. ಆದರೆ, ಅವರ ಹೇಳಿಕೆಯ ಆಯ್ದ ಭಾಗಗಳನ್ನು ಮಾತ್ರ ಉಲ್ಲೇಖಿಸಿ ಜನರ ಹಾಗೂ ಸದನದ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್‌(Congress) ಮುಖಂಡರ ವಿರುದ್ಧ ಹರಿಹಾಯ್ದರು.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *