Breaking News

ರತನ್ ಟಾಟಾಗೆ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರಧಾನ


ಪ್ರಮುಖ ಉದ್ಯಮಿ ಹಾಗೂ ಟಾಟಾ ಟ್ರಸ್ಟ್​ನ ಅಧ್ಯಕ್ಷರಾದ ರತನ್ ಟಾಟಾ ಅವರಿಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ರಾಜ್ಯದ ಅತ್ಯುನ್ನತ ಪ್ರಶಸ್ತಿಯಾದ ‘ಅಸ್ಸಾಂ ಬೈಭವ್’ ನೀಡಿದರು. ಮುಂಬೈನ ಕೊಲಾಬದಲ್ಲಿ ಈ ಕಾರ್ಯಕ್ರಮ ನಡೆಯಿತು. ಅಸ್ಸಾಂನಲ್ಲಿ ಕ್ಯಾನ್ಸರ್​ ಚಿಕಿತ್ಸೆಗಾಗಿ ನೀಡಿದ ಅಮೋಘ ಕೊಡುಗೆಯನ್ನು ಪರಿಗಣಿಸಿ ರತನ್ ಟಾಟಾ ಅವರಿಗೆ ಈ ಗೌರವ ನೀಡಲಾಯಿತು. ಪ್ರಶಸ್ತಿಯು ಫಲಕ, ನಗದು ಮೊತ್ತವಾದ 5 ಲಕ್ಷ ರೂಪಾಯಿ ಹಾಗೂ ಪದಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಜನವರಿ 24ರಂದು ಸಮಾರಂಭವೊಂದರಲ್ಲಿ ನೀಡಬೇಕಾಗಿತ್ತು. ಆದರೆ ವೈಯಕ್ತಿಕ ಕಾರಣಗಳಿಗಾಗಿ ರತನ್​ ಟಾಟಾ ಅವರಿಗೆ ಭಾಗವಹಿಸುವುದಕ್ಕೆ ಸಾಧ್ಯವಾಗಿರಲಿಲ್ಲ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *