ಬೆಂಗಳೂರು: ರಾಷ್ಟ್ರ ಧ್ವಜವನ್ನು ಅವಮಾನಿಸಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಗುರುವಾರ ಬೆಳಗ್ಗೆ 11 ಗಂಟೆಯೊಳಗಾಗಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಜತೆಗೆ ಪೊಲೀಸರು ಸುಮೊಟೋ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು.
ಇಲ್ಲದಿದ್ದರೆ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಹಾಗೂ ಬಿಜೆಪಿಯೂ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಹೀಗಾಗಿ ಬಿಜೆಪಿಯ ವಿರುದ್ಧ ಜನತಾ ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತೇವೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

