ಚಿಕ್ಕಬಳ್ಳಾಪುರ : ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆ ಮತ್ತು ಅವರ ಪತ್ನಿ ಆತ್ಮಹತ್ಯೆ ಯತ್ನಿಸಿದ್ದು ಪೇದೆಯ ಪತ್ನಿ ಮೃತಪಟ್ಟಿದ್ದು ಪೇದೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಣಕನೂರು ಬಳಿ ಸಂಭವಿಸಿದೆ.
ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಕುಮಾರ್ ಮತ್ತು ಅವರ ಪತ್ನಿ ಸ್ನೇಹ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ ಪೇದೆ ಸುರೇಂದ್ರ ಕುಮಾರ್ ಅವರು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಅದರಿಂದ ಮನನೊಂದ ಅವರ ಪತ್ನಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾರೆ, ಪೊಲೀಸ್ ಪೇದೆ ಸುರೇಂದ್ರ ಕುಮಾರ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಯದಿಂದ ಪಾರಾಗಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

