ಬೆಂಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮವನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ವತಿಯಿಂದ ಫೆಬ್ರವರಿ 19ರಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಅಧ್ಯಕ್ಷ ಎನ್ ಮೂರ್ತಿ ತಿಳಿಸಿದರು.
ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಮಾನ್ಯ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲರು ಸಂವಿಧಾನಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಧ್ವಜಸ್ತಂಭದ ಕಡೆಯಿಂದ ತೆಗೆಸುವ ಮೂಲಕ ಮಹಾನ್ ವ್ಯಕ್ತಿಗೆ ಅವಮಾನ ಮಾಡುತ್ತಾರೆ.
ಇದು ಈ ರಾಜ್ಯದ ಎಲ್ಲಾ ಜವಾಬ್ದಾರಿಯುತ ನಾಗರಿಕರನ್ನು ತೀವ್ರವಾಗಿ ನೋವುಂಟು ಮಾಡಲಾಗಿರುತ್ತದೆ .ಹಾಗಾಗಿ ಸಾವಿರಾರು ಸಂಘಟನೆಗಳ ಮುಖಾಂತರ ರಾಜ್ಯದ ಎಲ್ಲಾ ಕಡೆ ಬೃಹತ್ ಪ್ರತಿಭಟನೆಗಳು ನಡೆದಿರುತ್ತವೆ. ಅಲ್ಲದೆ ಕರ್ನಾಟಕದ ಉಚ್ಚ ನ್ಯಾಯಾಲಯದ ಎಲ್ಲಾ ನ್ಯಾಯಾಧೀಶರು ಸದಸ್ಯರು ಸಹ ಈ ಪ್ರಕರಣಕ್ಕೆ ಯಾವುದೇ ತಾರ್ಕಿಕ ಅಂತ್ಯವನ್ನು ನೀಡದೆ ಕೇವಲ ರಾಷ್ಟ್ರೀಯ ಹಬ್ಬಗಳಾದ ಗಣರಾಜ್ಯೋತ್ಸವ, ಸ್ವತಂತ್ರ ದಿನಾಚರಣೆ ಹಾಗೂ ಸಂವಿಧಾನ ದಿನದಂದು ಮಾತ್ರ ಅಂಬೇಡ್ಕರ್ ಅವರ ಭಾವಚಿತ್ರವನ್ನು ಇರಬೇಕೆಂದು ತೀರ್ಮಾನವನ್ನು ತೆಗೆದುಕೊಂಡಿದೆ ಇದನ್ನು ತೀವ್ರವಾಗಿ ಎಲ್ಲಾ ಸಂಘಟನೆಗಳು ಖಂಡಿಸುತ್ತೇವೆ ಎಂದರು.ವೆಂಕಟಸ್ವಾಮಿ, ಮಾವಳ್ಳಿ ವೆಂಕಟೇಶ್, ಎಂ ಮಹಾದೇವಸ್ವಾಮಿ, ಶ್ರೀಧರ್ ಮುಂತಾದ ದಲಿತ ಮುಖಂಡರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

