Breaking News

ಈಶ್ವರಪ್ಪ ರಾಜಿನಾಮೆ ಕೊಡುವಂತೆ ಕಾಂಗ್ರೆಸ್ ಒತ್ತಾಯ


ಬೆಂಗಳೂರು: ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಭಿತ್ತಿಪತ್ರ ಹಿಡಿದು ಕಲಾಪದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.

ವಿಧಾನಪರಿಷತ್ ಕಲಾಪದ ವೇಳೆಯೂ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯದ ಪ್ರತಿಧ್ವನಿ ಕೇಳಿಬಂದಿದೆ. ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

ಪರಿಷತ್ ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದು, ಸಚಿವ ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಿಸಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕು ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದರು. ಇದಕ್ಕೆ ಧ್ವನಿಗೂಡಿಸಿದ ಪ್ರಕಾಶ್ ರಾಥೋಡ್, ಸಚಿವ ಈಶ್ವರಪ್ಪ ಒಮ್ಮೆ ನೀಡಿದ ಹೇಳಿಕೆ ಬದಲಾಯಿಸಲು ಸಾಧ್ಯವಿಲ್ಲ. ಕೊಲೆ ಮಾಡಿ, ಒಳ್ಳೆಯ ಉದ್ದೇಶಕ್ಕೆ ಕೊಲೆ ಮಾಡಿದೆ ಎಂದು ಸಮರ್ಥಿಸಿಕೊಂಡರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *