Breaking News

ಈಶ್ವರಪ್ಪಗೆ ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮ್ಮ ಗೊತ್ತಿದೆ : ಡಿಕೆಶಿ


ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದು, ಸಚಿವರ ಹೇಳಿಕೆ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ, ರಾಷ್ಟ್ರದ್ರೋಹದ ಕೆಲಸ ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.
ಆದರೆ ತಿರಂಗಾ ಯಾತ್ರೆ ಮಾಡಿರುವ ನಾನು ರಾಷ್ಟ್ರಭಕ್ತ. ಹೀಗಾಗಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಸಚಿವ ಈಶ್ವರಪ್ಪ ದೇಶದ್ರೋಹದ ಕೆಲಸ ಮಾಡಿದ್ದಾರೆ. ಮೊದಲು ಅವರು ರಾಜೀನಾಮೆ ಕೊಡಬೇಕು. ಕೊಟ್ಟಿಲ್ಲವೆಂದರೆ ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಹೇಳಿದ್ದಾರೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *