ಬೆಂಗಳೂರು : ಮುಸ್ಲಿಂ ವಿದ್ಯಾರ್ಥಿಗಳು ನೂರಾರು ವರ್ಷಗಳಿಂದ ಹಿಜಾಬ್ ಧರಿಸುತ್ತಿದ್ದಾರೆ. ಏಕಾಏಕಿ ಹಿಜಾಬ್ ತೆಗೆಯಿರಿ ಅಂದರೆ ಹೇಗೆ ಸಾಧ್ಯ? ನಾವು ಕೋರ್ಟ್ ಆದೇಶವನ್ನ ಪಾಲನೆ ಮಾಡುತ್ತಿದ್ದೇವೆ, ಎಂದು ಬೆಂಗಳೂರಿನಲ್ಲಿ ಶಾಸಕ ಜಮೀರ್ ಅಹಮದ್ ಹೇಳಿಕೆ ನೀಡಿದ್ದಾರೆ. ಕಳೆದ ತಿಂಗಳು ಕೇಸರಿ ಶಾಲು ಎಲ್ಲಿಂದ ಬಂತು,?
ಕೆಲವು ಕಾಲೇಜುಗಳಲ್ಲಿ ಷಡ್ಯಂತ್ರ ನಡೆಯುತ್ತಿದೆ. ಕಾಣದ ಕೈಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಲವು ವಿದ್ಯಾರ್ಥಿಗಳಿಗೆ ಒಳಗೆ ಹೋಗಲು ಬಿಡುತ್ತಿಲ್ಲ. ರಾಜ್ಯ ಸರ್ಕಾರ ಆದೇಶವನ್ನ ಹಿಂಪಡೆಯಬೇಕು ಎಂದಿದ್ದಾರೆ.ಹೈಕೋರ್ಟ್ ನೀಡುವ ತೀರ್ಪಿನ ಬಗ್ಗೆ ವಿಶ್ವಾಸವಿದೆ ಎಂದು ಜಮೀರ್ ಅಹಮದ್ ಹೇಳಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

