Breaking News

ರಾಜ್ಯದಲ್ಲಿ 1,579 ಕೋವಿಡ್ ದೃಢ


ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದ್ದು, ಇಂದು 1,579 ಮಂದಿಗೆ ಕೋವಿಡ್ ದೃಢಪಟ್ಟಿದ್ರೆ,23 ಜನ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ.

ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 769 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,579 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 1.74 %ಕ್ಕೆ ತಲುಪಿದೆ’ ಎಂದಿದ್ದಾರೆ. ಬೆಂಗಳೂರಿನಲ್ಲಿ 7 ಜನ ಸೇರಿ ರಾಜ್ಯಾದ್ಯಾಂತ 23 ಮಂದಿ ಬಲಿಯಾಗಿದ್ದಾರೆ. ಇನ್ನು 5,079 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 19,761 ಕ್ಕೆ ತಲುಪಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *