Breaking News

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕುಸಿತ



ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 25,920 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೂರನೇ ಅಲೆಯಲ್ಲಿ ಜನರು ನಿಟ್ಟುಸಿರುಬಿಡುವಂತಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 492 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಬಲಿಯಾದವರ ಸಂಖ್ಯೆ 5,10,905 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 292092 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 66,254 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,19,77,238 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *