ರಾಯಚೂರು: ಕಲ್ಲು ಕುಸಿದು ಕಾರ್ಮಿಕ ಮೃತಪಟ್ಟಿದ್ದಾರೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ಸೇರಿದ ಊಟಿ ಚಿನ್ನದ ಗಣಿಯಲ್ಲಿ ಸುಮಾರು 800 ಅಡಿ ಆಳದಲ್ಲಿ ಕೆಲಸ ಮಾಡುವ ವೇಳೆ ದುರ್ಘಟನೆ
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಊಟಿ ಚಿನ್ನದ ಗಣಿಯಲ್ಲಿ ನಡೆದಿದೆ.
ಮೇಲ್ಭಾಗದಿಂದ ಕಲ್ಲು ಕುಸಿದು ಕಾರ್ಮಿಕ ಯಲ್ಲಪ್ಪ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಕಾರ್ಮಿಕನಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಅಧಿಕಾರಿಗಳ ನಿರ್ಲಕ್ಷ ಕಾರಣವೆಂದು ಆರೋಪಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

