Breaking News

ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿಕೆ ಮಾಜಿ ಸಿಎಂ

ಬೆಂಗಳೂರು: ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಸಹ ಹಾಳು ಮಾಡಬಾರದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಮತ್ತು ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಆದರೆ, ಬಿಜೆಪಿ ಆರ್‌ಎಸ್‌ಎಸ್‌ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟ ಇಟ್ಟುಕೊಂಡು ಹೋರಾಟ ಮಾಡುತ್ತಿವೆ.

ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು ಎನ್ನುವುದು ಆ ಸಂಘಟನೆಗಳ ಮಹದಾಸೆ. ಅವರ ಅಜೆಂಡಾ ಸಹ ಅದೆ. ಈ ಹಿನ್ನೆಲೆಯಲ್ಲಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆಯ ಮೇಲೂ ಕೇಸರಿ ಬಾವುಟವನ್ನು ಯಾರಾದರೂ ಹಾರಿಸಬಹುದು ಎಂದು ಹೇಳಿದ್ದರು. ನಾನೇ ಹಾರಿಸುತ್ತೇನೆ ಎಂದು ಅವರೇನೂ ಹೇಳಿಲ್ಲ. ಹೀಗಿದ್ದರೂ ಕಾಂಗ್ರೆಸ್‌ ಪ್ರತಿಷ್ಠೆಗೆ ಬಿದ್ದು ಕಲಾಪವನ್ನು ಹಾಳು ಮಾಡುತ್ತಿದೆ ಎಂದು ಟೀಕಿಸಿದರು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *