Breaking News

ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸದನದಲ್ಲಿ ಅಹೋರಾತ್ರಿ ಹೋರಾಟ


ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ.

ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *