ಬೆಂಗಳೂರು: ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಪೀಠ, ಈ ಅರ್ಜಿಯನ್ನು ಪರಿಗಣಿಸಲು ಸಮ್ಮತಿಸಿದೆ.
ಕರ್ನಾಟಕದಲ್ಲಿನ ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಹಿಜಾಬ್ ನಿಷೇಧದ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ನಡುವೆ ಹೊಸ ಅರ್ಜಿ ಹೈಕೋರ್ಟ್‌ಗೆ ಸಲ್ಲಿಕೆಯಾಗಿದೆ.
ಹೈಕೋರ್ಟಿನ ಮಧ್ಯಂತರ ಆದೇಶವು ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ತೊಡುಗೆಗೆ ನಿಷೇಧ ಹೇರಿದೆ. ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಎಂದು ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಈ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪಿನಲ್ಲಿ ಹೇಳಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

