ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಗಲಾಟೆ ಎಲ್ಲವೂ ಸರಿಯಾಗಲಿದೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1 ರಿಂದ 12 ನೇ ತರಗತಿ ಮಕ್ಕಳಿಗೆ ಸಮವಸ್ತ್ರ ಇದೆ.
ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಸ್ವಲ್ಪ ಗೊಂದಲ ಇದೆ. ನಿನ್ನೆ ಮುಸ್ಲಿಂ ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಅವರು ಕೋರ್ಟ್ ಆದೇಶ ಪಾಲಿಸಲು ಮುಖಂಡರಿಗೆ ಹೇಳಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸುವ ಕೆಲಸ ಮಾಡುತ್ತೇವೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

