Breaking News

ಗರಗ ಜಾತ್ರೆಗೆ ಬಿಗಿ ಭದ್ರತೆ :ಕೃಷ್ಣಕಾಂತ

ಧಾರವಾಡ: ಉತ್ತರ ಕರ್ನಾಟಕ ಭಾಗದಲ್ಲಿ ದೊಡ್ಡ ಜಾತ್ರೆ ಎನಿಸಿಕೊಂಡಿರುವ ಗರಗ ಮಡಿವಾಳೇಶ್ವರ ಜಾತ್ರೆ ಇಂದು (ಶನಿವಾರ) ನಡೆಯಲಿದ್ದು, ಅದಕ್ಕಾಗಿ ಬಿಗಿ ಪೊಲೀಸ್ ಭದ್ರತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ತಿಳಿಸಿದ್ದಾರೆ.

ಹತ್ತು ಜನ ಪೊಲೀಸ್ ಅಧಿಕಾರಿಗಳು ಸೇರಿದಂತೆ ದೊಡ್ಡಮಟ್ಟದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಗರಗ ಜಾತ್ರೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವಿಡಿಯೋಗ್ರಫಿ ಕೂಡ ಮಾಡಲಾಗುತ್ತದೆ. ಗಲಾಟೆ, ದಾಂಧಲೆ ನಡೆಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಿ.ಕೃಷ್ಣಕಾಂತ ಎಚ್ಚರಿಕೆ ನೀಡಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *