Breaking News

ಗೋಡೆಗೆ ಡಿಕ್ಕಿ ಹೊಡೆದ ಬೈಕ್: ಸವಾರ ಸ್ಥಳದಲ್ಲೇ ಸಾವು

ಧಾರವಾಡ: ರಸ್ತೆಯ ತಿರುವಿನಲ್ಲಿದ್ದ ಮನೆಯ ಗೋಡೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನ ಹೆಸರು, ವಿಳಾಸ ತಿಳಿದು ಬಂದಿಲ್ಲ. ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿದ್ದ ಮದುವೆಗೆಂದು ಈ ಯುವಕ ಬೈಕ್ ತೆಗೆದುಕೊಂಡು ಬಂದಿದ್ದ ಎಂದು ಗೊತ್ತಾಗಿದೆ.

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ಮನೆಯ ಗೋಡೆ ಸಹಿತ ಕುಸಿದು ಬಿದ್ದಿದೆ. ಘಟನೆ ಸಂಬಂಧ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *