ತುಮಕೂರು: ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಲಾಗಿದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟೌನ್‌ಹಾಲ್ ಬಳಿಯ ಸರ್ಕಾರಿ ಎಂಪ್ರೆಸ್ ಜೂನಿಯರ್ ಪಿಯು ಕಾಲೇಜಿನಲ್ಲಿ ಬುಧವಾರ ಹಿಜಾಬ್ ಮತ್ತು ಬುರ್ಖಾ ಧರಿಸಿದ್ದಕ್ಕಾಗಿ ತರಗತಿಯೊಳಗೆ ಪ್ರವೇಶ ನಿರಾಕರಿಸಿದಾಗ ಸುಮಾರು 40 ವಿದ್ಯಾರ್ಥಿನಿಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು.
ಸೆಕ್ಷನ್ 144 ಜಾರಿಯಲ್ಲಿದ್ದರೂ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿ ನಡೆಸಿದರು. ತುಮಕೂರಿನ ಎಂಪ್ರೆಸ್ ಕಾಲೇಜಿನ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಿ ಪೊಲೀಸರು ಆದೇಶಿಸಿದ್ದರು. ಆದರೆ ಈ ಆದೇಶವನ್ನು ವಿದ್ಯಾರ್ಥಿಗಳು ಉಲ್ಲಂಘಿಸಿದ ಹಿನ್ನೆಲೆ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ನಿಷೇಧಾಜ್ಞೆ ಲೆಕ್ಕಿಸದೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ಪ್ರತಿಭಟನೆ ಹಿನ್ನೆಲೆಯಲ್ಲಿ ಕಾಲೇಜಿನ ಪ್ರಾಂಶುಪಾಲರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಹಿಜಾಬ್ ಪ್ರತಿಭಟನೆ ಸಂಬಂಧ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ವಿದ್ಯಾರ್ಥಿನಿಯರ ಮೇಲೆ ಎಫ್‌ಐಆರ್ ದಾಖಲಾಗಿದೆ .ಆದರೆ, ಯಾವುದೇ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖ ಮಾಡಿಲ್ಲ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

