ನವದೆಹಲಿ: ಇಂದು ಪಂಜಾಬ್ ವಿಧಾನಸಭೆಯ ಎಲ್ಲಾ 117 ಸ್ಥಾನಗಳಿಗೆ ಮತ್ತು ಉತ್ತರ ಪ್ರದೇಶದ 59 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯಲಿದೆ.
ಉತ್ತರ ಪ್ರದೇಶ ವಿಧಾನಸಭೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. ಮೂರನೇ ಹಂತದಲ್ಲಿ 16 ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯಲಿದೆ. ಈ ಹಂತದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿಗೂ ಹೆಚ್ಚು ಜನರು ಮತದಾರರಿದ್ದಾರೆ. ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6 ರವರೆಗೆ ಮತ್ತು ಯುಪಿಯಲ್ಲಿ 59 ಕ್ಷೇತ್ರಗಳಲ್ಲಿ ಬೆಳಿಗ್ಗೆ 7 ರಿಂದಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

