ಉಡುಪಿ : ರೈತ ಸಮುದಾಯಕ್ಕೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪಹಣಿ ಸೇರಿದಂತೆ ಕಂದಾಯ ಇಲಾಖೆಯ ದಾಖಲೆಗಳು ಮನೆ ಬಾಗಿಲಿಗೆ ತಲುಪಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಈ ತಿಂಗಳಲ್ಲೇ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕಂದೂರು ಬ್ರಹ್ಮಾವರ ತಾಲೂಕಿನ ಕೊಕ್ಕರ್ಣಿಗಳಲ್ಲಿ ರಾಜ್ಯದ 247 ಕಡೆಗಳಲ್‌ಇ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಚಿವ ಆರ್.ಅಶೋಕ್,ರಾಝ್ಯದ 56 ಲಕ್ಷ ರೈತರ ಮನೆ ಬಾಗಿಲಿಗೆ ಒಂದೇ ದಿನ ಉಚಿತ ಪಹಣಿ ಮುಟ್ಟಿಸುತ್ತೇವೆ. ಮನೆ ಬಾಗಿಲಿಗೆ ಬಂತು ದಾಖಲೆ ನೋಡಿ ಎಂಬುದು ಕಾರ್ಯಕ್ರಮದ ಘೋಷವಾಕ್ಯವಾಗಲಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

