ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಕನ್ನಡದ ತನುಜಾ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ.
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತನುಜಾ ಎಂಬ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್ನಲ್ಲಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ.
ತುನುಜಾ ನೈಜ ಘಟನೆ ಆಧರಿಸಿದ ಸಿನಿಮಾ. ಕೊವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕಥೆಯೇ ಈಗ ಸಿನಿಮಾವಾಗಿದ್ದು, ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿಯವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅದರಲ್ಲಿ ಬಿ.ಎಸ್. ಯಡಿಯೂರಪ್ಪ ನಟಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

