ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹಿನ್ನೆಲೆ, ಮುನ್ನಚ್ಚರಿಕಾ ಕ್ರಮವಾಗಿ ಇಂದು ನಗರದ ಶಾಲಾ ಕಾಲೇಜುಗಳಿಗೆ ಡಿಸಿ ಡಾ. ಸೆಲ್ವಮಣಿ ರಜೆ ಘೋಷಿಸಿದ್ದಾರೆ.
ನಗರದ ಸೀಗೆಹಟ್ಟಿ ನಿವಾಸಿ ಹರ್ಷ (24) ನ ಮೇಲೆ ಮಾರಕಾಸ್ತ್ರಗಳಿಂದ ಹತ್ಯೆಗೈದು ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ.
ಹಲ್ಲೆ ನಡೆಯುತ್ತಿದ್ದಂತೆ ಎರಡು ಗುಂಪುಗಳ ನಡುವೆ ನಗರದಲ್ಲಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ಪೊಲೀಸರು ಲಾಠಿ ಚಾರ್ಜ್ ಮಾಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

