Breaking News

ಅಡುಗೆ ಅನಿಲ ಪೈಪ್ ಲೈನ್‌ನಲ್ಲಿ ಸೋರಿಕೆ: ರಸ್ತೆಯ ಅಗ್ನಿಯ ರೌದ್ರ ನರ್ತನ

ಹುಬ್ಬಳ್ಳಿ: ಅಡುಗೆ ಅನಿಲದ ಪೈಪ್ ಲೈನ್‌ನಲ್ಲಿ ಸೋರಿಕೆ ಉಂಟಾದ ಪರಿಣಾಮ ಏಕಾಏಕಿ ಬೆಂಕಿ ಕಾಣಿಕೊಂಡು ಅಗ್ನಿಯ ರೌದ್ರ ನರ್ತನ ತಾಳಿದ ಘಟನೆ ಹುಬ್ಬಳ್ಳಿಯ ತೆಂಗಿನಕಾಯಿ ಲೇಔಟ್‌ನಲ್ಲಿ ನಡೆದಿದೆ.

ಗ್ಯಾಸ್ ಲಿಕೇಜ್ ಆಗಿರುವ ಪರಿಣಾಮ ಜನರ ಆತಂಕಗೊಂಡು ಮನೆಯಿಂದ ಹೊರ ಬಂದಿದ್ದಾರೆ. ಇನ್ನೂ ಜನರು ಹೊರ ಬರುತ್ತಿದ್ದಂತೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮನೆ ಮನೆಗೆ ಸಂಪರ್ಕ ಕಲ್ಪಿಸುವ ಅಡುಗೆ ಅನಿಲದ ಪೈಪ್ ಲೈನ್ ಇದಾಗಿದೆ.

ಇನ್ನೂ ಬೆಂಕಿ ಹತ್ತಿಕೊಂಡ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ವಿದ್ಯಾನಗರ, ಗೋಕುಲ ಠಾಣೆ ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *