Breaking News

ಸಬ್ ಇನ್ಸ್ಪೆಕ್ಟರ್ ಹುದ್ದೆಯ ಎಕ್ಸಾಂನಲ್ಲಿ ಅಕ್ರಮ ಖಂಡಿಸಿ ಪ್ರತಿಭಟನೆ


ಧಾರವಾಡ : ಸಬ್ ಇನ್ಸ್ಪೆಕ್ಟರ್ ಹುದ್ದೆಯ ಎಕ್ಸಾಂ ನಲ್ಲಿ ಅಕ್ರಮ ನಡೆದಿರುವ ಘಟನೆ ಖಂಡಿಸಿ ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ಪರೀಕ್ಷೆಯಲ್ಲಿ ಬ್ಲೂಟೂತ್ ಸೇರಿದಂತೆ ಇನ್ನಿತರ ಹೈಟೆಕ್ ತಂತ್ರಜ್ಞಾನ ಬಳಸಿ ಪರೀಕ್ಷೆಯಲ್ಲಿ ಹಲವು ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಪಾಸಾಗಿದ್ದು ಅಕ್ರಮ ಎಸಗಿದ್ದಾರೆ. ಕೂಡಲೇ ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರವಿಶಂಕರ್, ಹರಿಪ್ರಸಾದ್, ಗುರು, ಸಂತೋಷ, ಶ್ರೀಧರ, ಮಲ್ಲಿಕಾರ್ಜುನ, ಶ್ರೀಕಾಂತ ಸೇರಿದಂತೆ ಹಲವು ಸಬ್ ಇನ್ಸ್ಪೆಕ್ಟರ್ ಪರೀಕ್ಷಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *