ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.
ಪರಿಷತ್ ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಮಾಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಕೊಲೆ ಆದ ಯುವಕನ ತಾಯಿ, ತನ್ನ ಮಗ ಎರಡು ವರ್ಷಗಳಿಂದ ಭಜರಂಗದಳದಲ್ಲಿ ಇಲ್ಲ ಅಂತ ಹೇಳಿದ್ದಾರೆ. ಇತ್ತ ಈಶ್ವರಪ್ಪ ಇದು ಮುಸ್ಲಿಂ ಗೂಂಡಾಗಳಿಂದ ಕೊಲೆ ಆಗಿದೆ ಅಂತಾರೆ. ಗೃಹ ಸಚಿವರು ಇದ್ದಾಗ ಇವರು ಹೇಳಿಕೆ ಕೊಟ್ಟಿದ್ದಾರೆ. ಹೀಗಾಗಿ ಈ ಕೊಲೆಯನ್ನು ಈಶ್ವರಪ್ಪನೇ ಮಾಡಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

