ಬೀದರ್: ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಲ್ಲಿಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿದರು.
ನಂತರ ಬ್ಯಾನರ್ ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದು, ರಾಜ್ಯಪಾಲರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.
ದೇಶದಲ್ಲಿ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸುವುದಾಗಿ ನೀಡಿರುವ ಹೇಳಿಕೆ ಅಪಾಯಕಾರಿಯಾಗಿದೆ. ತ್ರಿವರ್ಣ ಧ್ವಜವು ದೇಶದ ಸ್ವಾತಂತ್ರ್ಯ, ಅಖಂಡತೆ ಹಾಗೂ ಸಾರಭೌಮದ ಸಂಕೇತವಾಗಿದೆ. ಈಶ್ವರಪ್ಪ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಧರಣಿಯನ್ನೂ ನಡೆಸಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

