Breaking News

ಹರ್ಷ ಹತ್ಯೆ ಪ್ರಕರಣ : 6 ಆರೋಪಿಗಳ ಬಂಧನ, 13 ಎಫ್​ಐಆರ್​ ದಾಖಲು

ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೊದಲು ಕಾಸಿಮ್, ನದೀಮ್ ಎಂಬುವರನ್ನು ಬಂಧಿಸಲಾಗಿತ್ತು. ಇದೀಗ ಉಳಿದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಲ್ಲರೂ ಶಿವಮೊಗ್ಗ ನಗರದ ನಿವಾಸಿಗಳು. ಪ್ರಕರಣದಲ್ಲಿ ಈವರೆಗೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಇದುವರೆಗೆ 13 ಎಫ್​ಐಆರ್​ ದಾಖಲಾಗಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದರ ಅವರು, ಹರ್ಷ ಹತ್ಯೆ ಪ್ರಕರಣದ ಬಗ್ಗೆ ಇನ್ನೂ ತನಿಖೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಎ1, ಎ2 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಯಿತು. ನಿನ್ನೆ ಗಲಾಟೆ ವೇಳೆ ಗಾಯಗೊಂಡಿದ್ದಾಗಿ 8 ಜನರಿಂದ ದೂರು ನೀಡಲಾಗಿದೆ. 18 ವಾಹನಗಳ ಮೇಲೆ ದಾಳಿ ನಡೆಸಿ ಬೆಂಕಿಯನ್ನೂ ಹಚ್ಚಿದ್ದಾರೆ. ಶಿವಮೊಗ್ಗದಲ್ಲಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಹತ್ಯೆಯಾಗಿರುವ ಹರ್ಷನ ವಿರುದ್ಧ 2 ಪ್ರಕರಣ ದಾಖಲಾಗಿದ್ದವು. ಎ1, ಎ3, ಎ4, ಎ5 ಹರ್ಷನ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಎ2, ಎ6 ಹಂತಕರಿಗೆ ಸಹಕಾರ ನೀಡಿದ್ದಾರೆ. ಒಟ್ಟು 12 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದೆವು. 6 ಜನರ ಪಾತ್ರ ಕಂಡುಬಾರದ ಹಿನ್ನೆಲೆ ಬಿಟ್ಟು ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

ಎ1 ಮೊಹಮ್ಮದ್ ಕಾಸಿಫ್, ಎ2 ಸೈಯದ್ ನದೀಮ್, ಎ3 ಆಸಿಫ್ ಉಲ್ಲಾ ಖಾನ್, ಎ4 ರಿಹಾನ್ ಷರೀಫ್​, ಎ5 ನಿಹಾನ್, ಎ6 ಅಬ್ದುಲ್ ಅಫ್ನಾನ್​ ಬಂಧಿಸಲಾಗಿದೆ. ಎಲ್ಲಾ 6 ಆರೋಪಿಗಳನ್ನು ಶಿವಮೊಗ್ಗದಲ್ಲೇ ಬಂಧಿಸಲಾಗಿದೆ. ಬಂಧಿತ 6 ಆರೋಪಿಗಳ ಪೈಕಿ ನಾಲ್ವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ. ಗಲಭೆಯಲ್ಲಿ ಭಾಗಿಯಾಗಿದ್ದ ಅಪರಾಧ ಹಿನ್ನೆಲೆ ಹೊಂದಿದ್ದಾರೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹರ್ಷ ಹತ್ಯೆ ಪ್ರಕರಣದಲ್ಲಿ ಕಾಸಿಫ್, ಸೈಯದ್ ನದೀಮ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ನಾಲ್ವರು ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಬಂಧಿತರ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಮೊಗ್ಗದಲ್ಲಿ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​ ಹೇಳಿದ್ದಾರೆ. ಈ ಮಧ್ಯೆ, ಶಿವಮೊಗ್ಗ ಬಿಜೆಪಿ ಕಚೇರಿಗೆ ಸಂಸದ ತೇಜಸ್ವಿ ಸೂರ್ಯ ಭೇಟಿ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಹಿರಿಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *