Breaking News

ಹರ್ಷ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಖಾಸೀಫ್ ಮೇಲೆ 17 ಕೇಸ್ ದಾಖಲು


ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿರೋದಾಗಿ ತಿಳಿಸಿದ್ದಾರೆ. ಬಂಧಿತ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾರಿಕುವಂತ ಪೊಲೀಸರಿಗೆ ಸ್ಪೋಟಕ ಮಾಹಿತಿಗಳು ತಿಳಿದು ಬಂದಿವೆ.

ಈ ಮೂಲಕ ಹರ್ಷ ಹತ್ಯೆ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಪ್ರಮುಖ ಆರೋಪಿ ಖಾಸೀಫ್ ಮೇಲೆ 17 ಕೇಸ್ ಇದೆ ಎನ್ನಲಾಗಿದೆ. ನಗರದಲ್ಲಿ ಭಾನುವಾರದಂದು ನಡೆದಂತ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ತಂಡವನ್ನು ರಚಿಸಿ, ತನಿಖೆ ನಡೆಸುತ್ತಿದ್ದಾರೆ. ಈಗಾಗಲೇ ಪ್ರಕರಣ ಸಂಬಂಧ ಆರು ಆರೋಪಿಗಳನ್ನು ಬಂಧಿಸಿರೋದಾಗಿ ಎಸ್ಪಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದ್ದರು. ಈ ಬೆನ್ನಲ್ಲೇ ಪೊಲೀಸ್ ಇಲಾಖೆಯಿಂದ ಗೃಹ ಸಚಿವರಿಗೆ ಸಂಪೂರ್ಣ ವರದಿಯನ್ನು ಸಲ್ಲಿಸಿರೋದಾಗಿ ತಿಳಿದು ಬಂದಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *