Breaking News

ಹರ್ಷ ಹತ್ಯೆ ಪ್ರಕಣದಲ್ಲಿ ಬಿಗ್ ಟ್ವಿಸ್ಟ್


ಶಿವಮೊಗ್ಗ: ನಗರದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಇಲ್ಲಿಯವರೆಗೆ 8 ಆರೋಪಿಗಳ್ನು ಬಂಧಿಸಲಾಗಿದೆ. ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸರೇ ಅಪರಾಧಿಗಳನ್ನು ಮಟ್ಟ ಹಾಕೋದರಲ್ಲಿ ನಿರ್ಲಕ್ಷ್ಯ ವಹಿಸಿರೋದಾಗಿ ತಿಳಿದು ಬಂದಿದೆ.

ಹೀಗಾಗಿ ಪೊಲೀಸರ ವಿರುದ್ಧ ತನಿಖೆ ನಡೆಸುವಂತೆ ಸೂಚಿಸಿರೋದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತಂತೆ ತಮ್ಮ ಜಯಮಹಲ್ ನಿವಾಸದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದಂತ ಅವರು, ಹರ್ಷ ಹತ್ಯೆ ಪ್ರಕರಣದಲ್ಲಿ ಇಂದು ಮತ್ತಿಬ್ಬರು ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇವರನ್ನು ಮಟ್ಟ ಹಾಕಬೇಕಿದ್ದಂತ ಪೊಲೀಸರ ಬಗ್ಗೆ ದೂರು ಬಂದಿವೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಕೋಟೆ, ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸರ ವಿರುದ್ಧ ತನಿಖೆ ನಡೆಸಿ, ವರದಿ ನೀಡುವಂತೆ ಸೂಚಿಸಿರೋದಾಗಿ ತಿಳಿಸಿದರು

Share News

About admin

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *