ಶಿವಮೊಗ್ಗ : ” ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ತನಿಖೆ ತೀವ್ರವಾಗಿ ನಡೆಯುತ್ತಿದೆ. ಅದರ ಆಧಾರದ ಮೇಲೆ ಮುಂದಿನ ತನಿಖೆಯನ್ನು ಯಾವ ಸಂಸ್ಥೆಗೆ ನೀಡಬೇಕೆನ್ನುವುದು ನಿರ್ಧಾರವಾಗುತ್ತದೆ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಶಿವಮೊಗ್ಗದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವುದು ನಮ್ಮ ಆದ್ಯತೆಯಾಗಿದೆ. ಕರ್ಫ್ಯೂ ಸಹ ಜಾರಿಯಲ್ಲಿದೆ” ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

