ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಗೆ ರೂಪಿಸಬೇಕಾದ ಕಾರ್ಯತಂತ್ರ, ರಾಜ್ಯದ ಪ್ರಸಕ್ತ ವಿದ್ಯಮಾನ ಸೇರಿದಂತೆ ಕೆಲವೊಂದು ಮಹತ್ವದ ವಿಷಯಗಳ ಬಗ್ಗೆ ರಾಹುಲ್‌ಗಾಂಧಿ ಅವರು ಗುರುವಾರ ರಾಜ್ಯ ಕಾಂಗ್ರೆಸ್‌ನ ಪ್ರಮುಖ ನಾಯಕರ ಜತೆ ಚರ್ಚಿಸಲಿದ್ದಾರೆ.
ಗುರುವಾರ ಸಂಜೆ 4.30 ಕ್ಕೆ ದೆಹಲಿಯಲ್ಲಿ ಸಭೆ ನಡೆಯಲಿದ್ದು ರಾಹುಲ್‌ಗಾಂಧಿ ಜತೆ ನೇರಾ-ನೇರಾ ಮಾತುಕತೆಗೆ ಅವಕಾಶ ಸಿಕ್ಕರೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಬಣ ರಾಜಕೀಯದಿಂದ ಉಂಟಾಗುತ್ತಿರುವ ಗೊಂದಲ, ಪ್ರಮುಖ ತೀರ್ಮಾನ ಕೈಗೊಳ್ಳಲು ಸಮನ್ವಯ ಸಮಿತಿ ರಚನೆ ಬಗ್ಗೆ ಹಿರಿಯ ನಾಯಕರು ಪ್ರಸ್ತಾಪಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಗೊಂದಲ ಹಾಗೂ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಪಕ್ಷಕ್ಕೆ ಸಮಸ್ಯೆ
ಯಾಗಬಾರದು.ಎಲ್ಲರೂ ಒಟ್ಟಾಗಿ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಾಕೀತು ಮಾಡುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

