ಶಿವಮೊಗ್ಗ: ‘ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯ ನಂತರ ಸಚಿವ ಕೆ.ಎಸ್. ಈಶ್ವರಪ್ಪ, ನಗರ ಪಾಲಿಕೆ ಸದಸ್ಯ ಎಸ್.ಎನ್. ಚನ್ನಬಸಪ್ಪ ಅವರು ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಒಂದು ಸಮುದಾಯದ ಜೀವಿಸುವ ಹಕ್ಕನ್ನೇ ಕಿತ್ತುಕೊಳ್ಳುವಂತೆ ಅಪಪ್ರಚಾರ ಮಾಡಿದ್ದರು.
ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕೋರಿ ದೊಡ್ಡಪೇಟೆ ಠಾಣೆಗೆ ದೂರು ನೀಡಿದ್ದೇವೆ. ಆದರೆ, ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ’ ಎಂದು ಶಿವಮೊಗ್ಗ ಪೀಸ್ ಆರ್ಗನೈಶೇಷನ್ ಅಧ್ಯಕ್ಷ ರಿಯಾಜ್ ಅಹಮದ್ ಬುಧವಾರ ಆರೋಪಿಸಿದ್ದಾರೆ.
ಪ್ರಕರಣ ದಾಖಲಿಸದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾಧಿಕಾರಿ, ಜಿಲ್ಲಾ ನ್ಯಾಯಾಧೀಶರು ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅವರು ದೂರು ಸಲ್ಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

