ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವ ಡಾ.ಕೆ. ಸುಧಾಕರ್, ರಾಜ್ಯದಲ್ಲಿ ಕೋವಿಡ್ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ.5.21 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಅವರಲ್ಲಿ 4.69 ಕೋಟಿ ಮಂದಿ ಎರಡನೇ ಡೋಸ್ ಹಾಗೂ 11.64 ಲಕ್ಷ ಮಂದಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಸದ್ಯ 600ಕ್ಕೂ ಅಧಿಕ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ ಮೊದಲ ಡೋಸ್ ವಿತರಣೆಯಲ್ಲಿ ಶೇ 100 ರಷ್ಟು ಗುರಿ ಸಾಧನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

