Breaking News

ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಕಾಂಗ್ರೆಸ್‌ನವರು ಹಿಂದೆ ಅಧಿಕಾರದಲ್ಲಿದ್ದಾಗ ಮಾಡಿರುವ ಅನುಭವದಲ್ಲಿ ಹೇಳುತ್ತಿದ್ದಾರೆ. ನಮಗೆ ಅವರ ನೀತಿ ಪಾಠ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಘಟನೆ ಬಗ್ಗೆ ಕಾಂಗ್ರೆಸ್‌ ಮಾಡುತ್ತಿರುವ ಆರೋಪಗಳ ಬಗ್ಗೆ ತಿರುಗೇಟು ನೀಡಿದ್ದಾರೆ.

ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯ ನಂತರ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ್ದು, ಶಾಂತಿಯುತವಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳು, ವಿವಿಧ ತುಕಡಿಗಳು ಈಗಲೂ ಸ್ಥಳದಲ್ಲಿಯೇ ಬೀಡುಬಿಟ್ಟಿವೆ. ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್‌ ಹಾಕಲಾಗಿದೆ. ಸದ್ಯಕ್ಕೆ ದಿನ ಕಳೆದಂತೆ ಪರಿಸ್ಥಿತಿ ಸುಧಾರಿಸುತ್ತಿದೆ. ಯಾವುದೇ ರೀತಿಯ ಅಹಿತರ ಘಟನೆಗಳು ಮರುಕಳಿಸಿಲ್ಲ ಎಂದು ಹೇಳಿದರು.

Share News

About admin

Check Also

ಜೊಂಬಿ ಡ್ರಗ್ಸ್ ಸುಳ್ಳು ಸುದ್ದಿ, ವಿಡಿಯೋ ವೈರಲ್ ಮಾಡಿದವನನ್ನ ಅರೆಸ್ಟ್ ಮಾಡಲಾಗಿದೆ : ಜಿ.ಪರಮೇಶ್ವರ್

ಬೆಂಗಳೂರು : ಜೊಂಬಿ ಡ್ರಗ್ಸ್ ಸೇವಿಸುತ್ತಿದ್ದ ಎಂಬ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಮಿಷನರ್ ರಿಂದ ಪ್ರಕರಣದ ಬಗ್ಗೆ ಮಾಹಿತಿ …

Leave a Reply

Your email address will not be published. Required fields are marked *