Breaking News

ಹರ್ಷ ಕೊಲೆ ಪ್ರಕರಣ ಸಂಬಂಧಿಸಿದಂತೆ ನನ್ನನ್ನೂ ಬಂಧಿಸಲಿ : ಡಿಕೆಶಿ ಸವಾಲು

ಬೆಂಗಳೂರು: ಶಿವಮೊಗ್ಗದಲ್ಲಿ ನಡೆದ ಯುವಕ ಹರ್ಷ  ಕೊಲೆಗೆ ನನ್ನ ಪ್ರಚೋದನೆ ಇದೆ ಎಂದು ಸಚಿವರು ಹೇಳಿದ್ದಾರೆ. ಹೀಗಾಗಿ ನನ್ನನ್ನೂ ಬಂಧಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌  ಸವಾಲು ಹಾಕಿದ್ದಾರೆ.

ರಾಜ್ಯ ಕಾಂಗ್ರೆಸ್‌  ಟ್ವೀಟರ್‌ ಖಾತೆ ಮೂಲಕ ತಮ್ಮ ಹೇಳಿಕೆ ದಾಖಲಿಸಿರುವ ಅವರು, ಹರ್ಷ ಕೊಲೆಯಲ್ಲಿ ಕೆಲವರನ್ನು ಬಂಧಿಸಿದ್ದಾರೆ. ಘಟನೆಗೆ ನನ್ನ ಪ್ರಚೋದನೆಯೂ ಇದೆ ಎಂದು ಹೇಳಿರುವುದರಿಂದ ನನ್ನನ್ನೂ ಬಂಧಿಸಲಿ ಎಂದು ಹೇಳಿದರು. ಇನ್ನು ಸಚಿವರೇ ನಿಷೇಧಾಜ್ಞೆ ಮುರಿದು ಪಾರ್ಥಿವ ಶರೀರದ ಮೆರವಣಿಗೆ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟ ಮಾಡಿಸಿದ್ದಾರೆ. ಆದರೂ ಅವರ ಮೇಲೆ ಪ್ರಕರಣ ಏಕೆ ದಾಖಲಿಸಿಲ್ಲ. ಇದಕ್ಕೆ ಖಾಕಿ ತೊಟ್ಟವರು ಉತ್ತರಿಸಬೇಕು ಎಂದು ಪ್ರಶ್ನಿಸಿದ್ದಾರೆ.

Share News

About admin

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *