ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಹಾಗೂ ಇತರ ಶಿಕ್ಷಣಾ ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಯ ಆಫ್‌ಲೈನ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ನ್ಯಾಯಮೂರ್ತಿಗಳಾದ ಎ.ಎಂ.ಖಾನ್ವಿಲ್ಕರ್, ದಿನೇಶ್ ಮಾಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನೊಳಗೊಂಡ ಪೀಠವು, ‘ಈ
ರೀತಿಯ ಅರ್ಜಿಗಳು ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಲ್ಲಿ ಸುಳ್ಳು ಭರವಸೆಗಳನ್ನು ಮೂಡಿಸುವುದರ ಜತೆಗೆ ಗೊಂದಲಗಳನ್ನು ಮೂಡಿಸುತ್ತದೆ’ ಎಂದು ಹೇಳಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

