Breaking News

ರಷ್ಯಾ ದಾಳಿಗೆ 137 ನಾಗರಿಕರು, ಸೇನಾ ಸಿಬ್ಬಂದಿ ಸಾವು


ಕೀವ್​: ರಷ್ಯಾ ತನ್ನ ದೇಶದ ಮೇಲೆ ನಡೆಸಿದ ದಾಳಿಯಲ್ಲಿ ಇದುವರೆಗೆ 137 ನಾಗರಿಕರು ಮತ್ತು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹೇಳಿದ್ದಾರೆ.

ಅವರು ಮಾತನಾಡಿರುವ ವಿಡಿಯೋದಲ್ಲಿ, ರಷ್ಯಾವು ಸೇನಾ ನೆಲೆಗಳ ಮೇಲೆ ಮಾತ್ರವಲ್ಲದೇ ಜನರ ಮೇಲೂ ದಾಳಿ ಮಾಡುತ್ತಿದೆ. ಪ್ರಮುಖ ನಗರಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ. ಅಮಾಯಕರ ಬಲಿ ತೆಗೆದುಕೊಳ್ಳುತ್ತಿದೆ. ಈವರೆಗೆ ಸೈನಿಕರು ಸೇರಿದಂತೆ 137 ಜನರು ಹತರಾಗಿದ್ದು, ಇನ್ನೂ ನೂರಾರು ಜನರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಒಡೆಸಾ ಪ್ರದೇಶದ ಜ್ಮಿನಿ ದ್ವೀಪದಲ್ಲಿರುವ ಎಲ್ಲ ಭದ್ರತಾ ಪಡೆಯ ಸಿಬ್ಬಂದಿಯನ್ನು ರಷ್ಯಾ ಹೊಡೆದುರುಳಿಸಿದೆ. ಅಲ್ಲದೇ ಆ ಪ್ರದೇಶವನ್ನು ರಷ್ಯಾ ವಶಕ್ಕೆ ಪಡೆದಿದೆ. ಯುದ್ಧದಲ್ಲಿ ಮೃತಪಟ್ಟ ಸೈನಿಕರನ್ನು ಅಧ್ಯಕ್ಷ ವೊಲೊಡಿಮಿರ್ ಜೆಲೆನ್​ಸ್ಕಿ ಹುತಾತ್ಮರು ಎಂದು ಕರೆದಿದ್ದಾರೆ.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *