Breaking News

ರಷ್ಯಾ ಅಧ್ಯಕ್ಷರಿಗೆ ಕರೆ ಮಾಡಿ ಯುದ್ದ ನಿಲಿಸುವಂತೆ ಮಾನವಿ ಮಾಡಿದ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಉಕ್ರೇನ್‌ನಲ್ಲಿ ಇಂದು ಬೆಳಿಗ್ಗೆ ಪ್ರಾರಂಭವಾದ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸುವಂತೆ ಮನವಿ ಮಾಡಿದರು . ಮಧ್ಯಸ್ಥಿಕೆಗಾಗಿ ಭಾರತಕ್ಕೆ ಉಕ್ರೇನ್ ತುರ್ತು ಮನವಿ ಮಾಡಿದ ಗಂಟೆಗಳ ನಂತರ ಈ ಸಂಭಾಷಣೆ ನಡೆಯಿತು ಎನ್ನಲಾಗಿದೆ.

“ರಾಜತಾಂತ್ರಿಕ ಮಾತುಕತೆ ಮತ್ತು ಸಂವಾದದ ಹಾದಿಗೆ ಮರಳಲು ಎಲ್ಲಾ ಕಡೆಯಿಂದ ಸಂಘಟಿತ ಪ್ರಯತ್ನಗಳು ನಡೆಸುವ ಕುರಿತು ಪ್ರಧಾನಿ ಮೋದಿ ಕರೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

“ರಷ್ಯಾ ಮತ್ತು ನ್ಯಾಟೋ ಗುಂಪಿನ ನಡುವಿನ ಭಿನ್ನಾಭಿಪ್ರಾಯಗಳನ್ನು ಪ್ರಾಮಾಣಿಕ ಸಂಭಾಷಣೆಯ ಮೂಲಕ ಮಾತ್ರ ಪರಿಹರಿಸಬಹುದು” ಎಂದು ಅವರು ಹೇಳಿದ್ದು, ಬಳಿಕ ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಅಧ್ಯಕ್ಷ ಪುಟಿನ್ ಪ್ರಧಾನಿ ಮೋದಿಗೆ ವಿವರಿಸಿದರು ಎಂದು ವರದಿ ತಿಳಿಸಿದೆ.

Share News

About admin

Check Also

ಬರೋಬ್ಬರಿ 1 ಕೋಟಿ ರೂ.ಗೆ ರೆಡ್ ಸ್ಯಾಂಡ್ ಬೋವಾ ಮಾರಲು ಯತ್ನಿಸಿದವ ಸಿಸಿಬಿ ಬಲೆಗೆ..!

ಬೆಂಗಳೂರು: ಅಪರೂಪದ ‘ರೆಡ್ ಸ್ಯಾಂಡ್ ಬೋವಾ’ ಹಾವು ಹಾಗೂ ಕೋರಲ್ ಸೀ ಫ್ಯಾನ್‌ಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ ಎರಡು …

Leave a Reply

Your email address will not be published. Required fields are marked *