ರಾಯಚೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ 371-ಜೆ ಮೀಸಲಾತಿ ಕುರಿತು ನವೋದಯ ಶಿಕ್ಷಣ ಸಂಸ್ಥೆಯಿಂದ ಹೈಕೋರ್ಟ್‌ಗೆ ಸಲ್ಲಿಸಿರುವ ಅರ್ಜಿ ವಾಪಸ್ ಪಡೆದುಕೊಳ್ಳುವಂತೆ ಒತ್ತಾಯಿಸಿ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ವಿದ್ಯಾರ್ಥಿಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಿದರು.
ನಗರದ ಆರ್‌ಟಿಓ ಕಚೇರಿ ಎದುರು ಮಡಿವಾಳ ಮಾಚಿದೇವ ವೃತ್ತದಿಂದ ನವೋದಯ ಶಿಕ್ಷಣ ಸಂಸ್ಥೆಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಯಿತು.
371-ಜೆ ಪ್ರಕಾರ ಸರ್ಕಾರದಿಂದ ವೈದ್ಯಕೀಯ ಸೀಟು ಹಂಚಿಕೆಯಾಗಿರುವ ವಿದ್ಯಾರ್ಥಿಗಳಿಗೆ ಕೂಡಲೇ ಪ್ರವೇಶಾತಿ ನೀಡಬೇಕು. ಕಾಯ್ದೆ ಕುರಿತು ಹೈಕೋರ್ಟ್ ಮೊರೆ ಹೋಗಿರುವುದು ಸರಿಯಿಲ್ಲ.ಈ ಭಾಗದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

