Breaking News

ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಹೆಚ್ಚು : ಸಿಎಂ ಬೊಮ್ಮಾಯಿ

ಬೆಂಗಳೂರು: ‘ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಹೆಚ್ಚು.’ಆರೋಗ್ಯಕರ ಸಮಾಜ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪ್ರೆಸ್ ಕ್ಲಬ್ ಆಫ್‌ ಬೆಂಗಳೂರು ಗುರುವಾರ ಆಯೋಜಿಸಿದ್ದ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಧ್ಯಮ ರಂಗ ಪ್ರಜಾಪ್ರಭುತ್ವದ ಜೀವಾಳ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾಧ್ಯಮಗಳು ದನಿಯಾಗಬೇಕು’ ಎಂದು ಹೇಳಿದರು.

ಶಾಸಕ ಬಿ.ಎಸ್. ಯಡಿಯೂರಪ್ಪ, ನಟ ಸುದೀಪ್ ಮಾತನಾಡಿದರು. ಸಚಿವ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ, ಪತ್ರಕರ್ತ ಎಚ್‌.ಆರ್‌. ರಂಗನಾಥ್‌ ಮತ್ತು ನಟ ರಮೇಶ್‌ ಅರವಿಂದ್‌ ಅವರು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ನೀಡಿದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *