ಹುಬ್ಬಳ್ಳಿ : ಸೆಕ್ಯುರಿಟಿ ಗಾರ್ಡ್ ಓರ್ವರ ಮೃತ ದೇಹ ಭೀಕರವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಐಟಿ ಪಾರ್ಕ್ ನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ನಿಯಮಿಯದಲ್ಲಿ ನಡೆದಿದೆ.
ಮೃತ ದುರ್ದೈವಿ ಚನ್ನಮಲ್ಲಯ್ಯ ಶೇಖಯ್ಯ ಹಿರೇಮಠ (44) ಎಂದು ತಿಳಿದು ಬಂದಿದ್ದು, ಇತ ಮೂಲತಃ ಕುಂದಗೋಳ ತಾಲೂಕಿನ ಹಿತೇನರ್ತಿ ಗ್ರಾಮದ ನಿವಾಸಿಯಾಗಿದ್ದ, ಸದ್ಯ ಹುಬ್ಬಳ್ಳಿಯ ನೇಕಾರ ನಗರದಲ್ಲಿ ಪತ್ನಿ ಹಾಗೂ ಇಬ್ಬರ ಮಕ್ಕಳೊಂದಿಗೆ ವಾಸವಾಗಿದ್ದ ಎಂದು ತಿಳಿದುಬಂದಿದೆ. ಇತ ಐಟಿ ಪಾರ್ಕ್ ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದನಂತೆ, ನಿನ್ನೆ ರಾತ್ರಿ ಎಂದಿನಂತೆ ಕೆಲಸಕ್ಕೆ ಬಂದಿದ್ದ ಇತ, ಇಂದು ತಾನು ಕೆಲಸ ಮಾಡುತ್ತಿದ್ದ ಕಚೇರಿಯ ಶೌಚಾಲಯದಲ್ಲಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆದಿದ್ದು, ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಈ ಮೃತನ ಸಾವಿಗೆ ಕಾರಣವೆನ್ನು ಎಂಬುದು ತಿಳಿದುಬಂದಿಲ್ಲ. ಇನ್ನಷ್ಟೇ ಪೋಲಿಸ್ ತನಿಖೆಯಿಂದ ಹೊರಬರಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

