Breaking News

ಯುದ್ಧಪೀಡಿತ ಉಕ್ರೇನ್‌ನಲ್ಲಿ ರಾಜ್ಯದ 346 ವಿದ್ಯಾರ್ಥಿಗಳು ಬಂಧನ


ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಇಲ್ಲಿಯವರೆಗೂ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್‌ ಅಧಿಕಾರ ಮನೋಜ್‌ ರಂಜನ್‌ ತಿಳಿಸಿದ್ದಾರೆ.

ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, ಸಂಬಂಧಿಕರು, ಸ್ನೇಹಿತರ ಬಳಗದಿಂದ ಕರೆಗಳು ಬರುತ್ತಿವೆ. ಆ ಆಧಾರದಲ್ಲಿ ಉಕ್ರೇನ್‌ನಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬಹುದು ಎಂದು ಅಂದಾಜಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಿಂದ ತೆರಳಿ ಉಕ್ರೇನ್‌ನಲ್ಲಿ ಸಿಲುಕಿಕೊಂಡಿರುವವರ ಸಹಾಯಕ್ಕಾಗಿ http://ukraine.karnataka.tech ಎಂಬ ವೆಬ್‌ ಪೋರ್ಟಲ್‌ ತೆರೆಯಲಾಗಿದೆ. ಸಂಬಂಧಪಟ್ಟವರು ಉಕ್ರೇನ್‌ನಲ್ಲಿ ಸಮಸ್ಯೆಗೆ ಸಿಲುಕಿರುವವರ ಮಾಹಿತಿಯನ್ನು ನೀಡಬಹುದು ಎಂದು ತಿಳಿಸಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *