Breaking News

ವಕೀಲ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಮನವಿ ಸಲ್ಲಿಕೆ

ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ʼಭ್ರಷ್ಟಾಚಾರದ ವಿರುದ್ಧ ನಾವುʼ ವೇದಿಕೆ ಅಡಿ ಪ್ರತಿಭಟನೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಮತ್ತು ಇತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಗದೀಶ್ ಅವರ ವಿರುದ್ಧ ದಾಖಲಿಸಿರುವ ಜಾತಿ ನಿಂದನೆ ಹಾಗೂ ಇತರೆ ಪ್ರಕರಣಗಳನ್ನು ಕೈಬಿಟ್ಟು, ಅವರ ಭ್ರಷ್ಟಾಚಾರ ವಿರುದ್ಧದ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಕೋರಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *